AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Donald Trump: 8 ಯುದ್ಧ ನಿಲ್ಲಿಸಿದರೂ ನೊಬೆಲ್ ಶಾಂತಿ ಪ್ರಶಸ್ತಿ ಟ್ರಂಪ್ ಕೈ ತಪ್ಪಿದ್ದೇಕೆ?; ಇಲ್ಲಿವೆ 4 ಕಾರಣ

Nobel Peace Prize: 'ನಾನು ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷ ಸೇರಿದಂತೆ 8 ಯುದ್ಧಗಳನ್ನು ತಡೆದಿದ್ದೇನೆ' ಎಂದು ಸ್ವಯಂಘೋಷಣೆ ಮಾಡಿಕೊಳ್ಳುತ್ತಾ, ಹೋದಲ್ಲೆಲ್ಲ ತನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಪ್ರಚಾರ ಮಾಡಿಕೊಳ್ಳುತ್ತಿದ್ದ ವಿಶ್ವದ ದೊಡ್ಡಣ್ಣನಾದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರೀ ಮುಖಭಂಗವಾಗಿದೆ. ಟ್ರಂಪ್ ಅವರ ಬದಲಾಗಿ ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊ ಅವರಿಗೆ ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ. ಹಾಗಾದರೆ, ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಮಿಸ್ ಆಗಿದ್ದೇಕೆ? ಈ ಬಗ್ಗೆ ನೊಬೆಲ್ ಪ್ರಶಸ್ತಿ ನೀಡುವ ಸಂಸ್ಥೆ ನೀಡಿದ ಸ್ಪಷ್ಟನೆಯೇನು?

Donald Trump: 8 ಯುದ್ಧ ನಿಲ್ಲಿಸಿದರೂ ನೊಬೆಲ್ ಶಾಂತಿ ಪ್ರಶಸ್ತಿ ಟ್ರಂಪ್ ಕೈ ತಪ್ಪಿದ್ದೇಕೆ?; ಇಲ್ಲಿವೆ 4 ಕಾರಣ
Us President Trump
ಸುಷ್ಮಾ ಚಕ್ರೆ
|

Updated on: Oct 10, 2025 | 4:31 PM

Share

ನವದೆಹಲಿ, ಅಕ್ಟೋಬರ್ 10: ನಾರ್ವೇಜಿಯನ್ ನೊಬೆಲ್ ಸಮಿತಿಯು ಇಂದು (ಶುಕ್ರವಾರ) ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊ ಅವರನ್ನು 2025ರ ನೊಬೆಲ್ ಶಾಂತಿ ಪ್ರಶಸ್ತಿಯ (Nobel Peace Prize) ವಿಜೇತರೆಂದು ಘೋಷಿಸಿತು. ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವ ಮತ್ತು ಸರ್ವಾಧಿಕಾರದ ಬದಲಾಗಿ ಪ್ರಜಾಪ್ರಭುತ್ವವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಅವರ ಹೋರಾಟಕ್ಕಾಗಿ ಆಕೆ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯ ರೇಸ್​​ನಲ್ಲಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಯಾಕೆ ಈ ಪ್ರಶಸ್ತಿ ನೀಡಲಿಲ್ಲ? ಎಂಬ ಪ್ರಶ್ನೆಯನ್ನು ಈ ಪ್ರಶಸ್ತಿಯ ಸಮಿತಿಯ ಅಧ್ಯಕ್ಷರನ್ನು ಕೇಳಲಾಯಿತು. ಅದಕ್ಕೆ ಅವರು ನೀಡಿದ ಕಾರಣ ಇಲ್ಲಿದೆ.

“ಕಳೆದ ಕೆಲವು ತಿಂಗಳುಗಳಿಂದ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೊಬೆಲ್ ಶಾಂತಿ ಪ್ರಶಸ್ತಿಗೆ ತಾವೇ ಅರ್ಹರು ಎಂದು ಪದೇ ಪದೇ ಹೇಳಿಕೊಂಡಿದ್ದಾರೆ. ತಮಗೆ ಈ ಪ್ರಶಸ್ತಿ ನೀಡದಿದ್ದರೆ ಅದು ಅಮೆರಿಕಕ್ಕೆ ಮಾಡಿದ ಅವಮಾನವಾಗುತ್ತದೆ ಎಂದು ಸಹ ಅವರು ಹೇಳಿದ್ದಾರೆ. ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಯ ಅಧ್ಯಕ್ಷರಾಗಿ ನೀವು ಇದರ ಬಗ್ಗೆ ಏನು ಹೇಳುತ್ತೀರಿ?” ಎಂದು ಪತ್ರಕರ್ತರೊಬ್ಬರು ಈ ಪ್ರಶಸ್ತಿ ಸಮಿತಿಯ ಅಧ್ಯಕ್ಷರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಮಿತಿಯ ಅಧ್ಯಕ್ಷರು, “ನೊಬೆಲ್ ಶಾಂತಿ ಪ್ರಶಸ್ತಿಯ ದೀರ್ಘ ಇತಿಹಾಸದಲ್ಲಿ ಈ ಸಮಿತಿಯು ಎಲ್ಲ ರೀತಿಯ ಪ್ರಚಾರ, ಮಾಧ್ಯಮಗಳ ಒತ್ತಡಗಳನ್ನು ಕಂಡಿದೆ. ಪ್ರತಿ ವರ್ಷ ಸಾವಿರಾರು ಜನರು ಶಾಂತಿ ಎಂದರೆ ಏನು ಎಂದು ಹೇಳುವ ಪತ್ರಗಳನ್ನು ನಾವು ಸ್ವೀಕರಿಸುತ್ತೇವೆ. ಈ ಸಮಿತಿಯ ಸದಸ್ಯರು ಎಲ್ಲಾ ಪ್ರಶಸ್ತಿ ವಿಜೇತರ ಫೋಟೋಗಳಿಂದ ತುಂಬಿದ ಕೊಠಡಿಯಲ್ಲಿ ಕುಳಿತುಕೊಳ್ಳುತ್ತಾರೆ. ಈ ಪ್ರಶಸ್ತಿಯು ಧೈರ್ಯ ಮತ್ತು ಸಮಗ್ರತೆಯಿಂದ ತುಂಬಿದೆ. ನಾವು ನಮ್ಮ ನಿರ್ಧಾರಗಳನ್ನು ನಮ್ಮ ಕೆಲಸ ಮತ್ತು ಆಲ್ಫ್ರೆಡ್ ನೊಬೆಲ್ ಅವರ ಇಚ್ಛೆಯ ಮೇಲೆ ಮಾತ್ರ ಆಧರಿಸಿದ್ದೇವೆ. ನೊಬೆಲ್ ಅವರ ಇಚ್ಛೆಗೆ ಅನುಸಾರವಾಗಿ ನಾವು ಅರ್ಹರನ್ನು ಆಯ್ಕೆ ಮಾಡುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ದೇಶಗಳನ್ನು ಬೆದರಿಸುತ್ತಾ, ಯುದ್ಧ ನಿಲ್ಲಿಸಿದ ಬಿಟ್ಟಿ ಕ್ರೆಡಿಟ್ ಪಡೆದು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಆಸೆ ಪಟ್ಟಿದ್ದ ಟ್ರಂಪ್​ಗೆ ನಿರಾಸೆ

“ಕಳೆದ ವರ್ಷ ಮರಿಯಾ ಮಚಾಡೊ ಅವರಿಗೆ ತಲೆಮರೆಸಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅವರ ಜೀವಕ್ಕೆ ಗಂಭೀರ ಬೆದರಿಕೆಗಳಿದ್ದರೂ ಅವರು ಆ ದೇಶದಲ್ಲಿಯೇ ಇದ್ದಾರೆ. ಇದು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದ ಆಯ್ಕೆಯಾಗಿದೆ. ಸರ್ವಾಧಿಕಾರಿಗಳು ಅಧಿಕಾರವನ್ನು ವಶಪಡಿಸಿಕೊಂಡಾಗ ಎದ್ದು ನಿಲ್ಲುವ ಮತ್ತು ವಿರೋಧಿಸುವ ಧೈರ್ಯದಿಂದ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವವರನ್ನು ಗುರುತಿಸುವುದು ಬಹಳ ಮುಖ್ಯ ಎಂಬ ಕಾರಣಕ್ಕೆ ನಾವು ಅವರನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದೇವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿ ಟ್ರಂಪ್ ಕೈತಪ್ಪಲು ಕಾರಣವೇನು?:

ಈ ಪ್ರಶಸ್ತಿಗೆ ಮಾಧ್ಯಮಗಳಲ್ಲಿ ಪ್ರಬಲ ಸ್ಪರ್ಧಿಯಾಗಿ ಉಲ್ಲೇಖಿಸಲ್ಪಟ್ಟಿದ್ದ ಟ್ರಂಪ್ ಅವರ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಸೇರಿಸಿರಲಿಲ್ಲ. ಕೆಲವು ತಿಂಗಳಿಂದ ಟ್ರಂಪ್ ತಮ್ಮನ್ನು ಜಾಗತಿಕ ಶಾಂತಿಪ್ರಿಯ ಎಂದು ಸಕ್ರಿಯವಾಗಿ ಪ್ರಚಾರ ಮಾಡಿಕೊಂಡಿದ್ದರು, ಅವರ 20 ಅಂಶಗಳ ಗಾಜಾ ಶಾಂತಿ ಯೋಜನೆಯನ್ನು ಎತ್ತಿ ತೋರಿಸಿದ್ದರು, ಹಲವಾರು ಯುದ್ಧಗಳನ್ನು ಕೊನೆಗೊಳಿಸಿದ ಕೀರ್ತಿಯನ್ನು ತಮಗೆ ತಾವೇ ಕೊಟ್ಟುಕೊಂಡಿದ್ದರು. 8 ತಿಂಗಳಲ್ಲಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪದೇಪದೆ ಹೇಳಿಕೊಳ್ಳುತ್ತಿದ್ದ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿರಲು 4 ಕಾರಣಗಳು ಇಲ್ಲಿವೆ.

ಇದನ್ನೂ ಓದಿ: Nobel Prize 2025 Winners: ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ

1. ನೊಬೆಲ್ ಶಾಂತಿ ಪ್ರಶಸ್ತಿಗೆ ಈ ಬಾರಿ 338 ಅರ್ಜಿಗಳು ಅಥವಾ ಶಿಫಾರಸುಗಳು ಬಂದಿದ್ದವು. ಈ ವರ್ಷದ ಪ್ರಶಸ್ತಿಗೆ ನಾಮನಿರ್ದೇಶನಗಳು ಜನವರಿ ಅಂತ್ಯದಲ್ಲಿ ಕೊನೆಗೊಂಡಿತ್ತು. ಆಗಷ್ಟೇ ಟ್ರಂಪ್ ಮತ್ತೊಮ್ಮೆ ಅಧಿಕಾರಕ್ಕೇರಿ ಶ್ವೇತಭವನಕ್ಕೆ ಪ್ರವೇಶಿಸಿದ್ದರು. ಅವರು ಪ್ರಚಾರ ನಡೆಸುವಷ್ಟರಲ್ಲಿ ನಾಮನಿರ್ದೇಶನದ ಅವಧಿ ಅಂತ್ಯಗೊಂಡಿತ್ತು.

2. 2025ರ ನೊಬೆಲ್ ಶಾಂತಿ ಪ್ರಶಸ್ತಿಯು 2024ರಲ್ಲಿ ಮಾಡಿದ ಕೆಲಸವನ್ನು ಗುರುತಿಸುತ್ತದೆ. ಆ ವರ್ಷದಲ್ಲಿ ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೂ ಇನ್ನೂ ಅಧಿಕಾರ ವಹಿಸಿಕೊಂಡಿರಲಿಲ್ಲ.

3. ಟ್ರಂಪ್ ಅಧ್ಯಕ್ಷರಾಗಿದ್ದ ಎರಡು ಅವಧಿಗಳಲ್ಲಿ ಅವರನ್ನು ರಷ್ಯಾ, ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು, ಕಾಂಬೋಡಿಯಾದ ಪ್ರಧಾನಿ ಹನ್ ಮಾನೆಟ್, ಉಕ್ರೇನಿಯನ್ ರಾಜಕಾರಣಿ ಮತ್ತು ಅಮೆರಿಕ, ಸ್ವೀಡನ್ ಮತ್ತು ನಾರ್ವೆಯ ಶಾಸಕರು ಹಲವಾರು ಬಾರಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದರು. ಆದರೂ ನಾಮನಿರ್ದೇಶನಗೊಂಡರೆ ಯಾರಾದರೂ ಸ್ವಯಂಚಾಲಿತವಾಗಿ ಅಭ್ಯರ್ಥಿಯಾಗುತ್ತಾರೆ ಎಂದರ್ಥವಲ್ಲ. ನೊಬೆಲ್ ಸಮಿತಿಯು ವಿಜೇತರನ್ನು ಘೋಷಿಸುವ ಮೊದಲು ನಾಮನಿರ್ದೇಶಿತರ ಹೆಸರನ್ನು ಎಂದಿಗೂ ಬಹಿರಂಗಪಡಿಸುವುದಿಲ್ಲ.

4. ವಿಜೇತರನ್ನು ಘೋಷಿಸುವಾಗ ನೊಬೆಲ್ ಸಮಿತಿ ಹೇಳಿದಂತೆ, “ಪ್ರಜಾಪ್ರಭುತ್ವವು ಹಿಮ್ಮೆಟ್ಟುತ್ತಿರುವ ಜಗತ್ತಿನಲ್ಲಿ ನಾವು ವಾಸಿಸುತ್ತಿದ್ದೇವೆ. ಅಲ್ಲಿ ಹೆಚ್ಚು ಹೆಚ್ಚು ಸರ್ವಾಧಿಕಾರಿ ಆಡಳಿತಗಳು ರೂಢಿಗಳನ್ನು ಪ್ರಶ್ನಿಸುತ್ತಿವೆ ಮತ್ತು ಹಿಂಸಾಚಾರವನ್ನು ಆಶ್ರಯಿಸುತ್ತಿವೆ. ಪ್ರಜಾಪ್ರಭುತ್ವಕ್ಕೆ ಶಾಂತಿಯುತ ಪರಿವರ್ತನೆಗಾಗಿ ಮಚಾಡೊ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ಸಮಿತಿ ಸ್ಪಷ್ಟಪಡಿಸಿದೆ. ಟ್ರಂಪ್ ಅವರಿಗೂ ಸಮಿತಿಯ ಈ ಧೋರಣೆಗೂ ಒಂದಕ್ಕೊಂದು ತಾಳೆಯಾಗುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಪಾಕಿಸ್ತಾನ ಸರ್ಕಾರ ಡೊನಾಲ್ಡ್ ಟ್ರಂಪ್ ಅವರನ್ನು 2025ರ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿತ್ತು. ಥೈಲ್ಯಾಂಡ್, ಕಾಂಬೋಡಿಯಾ, ಅಜೆರ್ಬೈಜಾನ್, ಅರ್ಮೇನಿಯಾ ರಾಷ್ಟ್ರಗಳು 2025ರ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಟ್ರಂಪ್ ಅವರನ್ನು ಬೆಂಬಲಿಸಿದ್ದವು. ಭಾರತ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಅಥವಾ ಯಾವುದೇ ಧೋರಣೆ ತಳೆದಿರಲಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ