Narendra Modi Birthday: ರಷ್ಯಾದ ಅಧ್ಯಕ್ಷ ಪುಟಿನ್ ಪ್ರಧಾನಿ ಮೋದಿಯನ್ನು ಭೇಟಿಯಾದರೂ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲಿಲ್ಲ ಏಕೆ?
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶಾಂಘೈ ಸಹಕಾರ ಸಂಘಟನೆಯ ವಾರ್ಷಿಕ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪ್ರಭಾವಿ ಗುಂಪಿನ ಇತರ ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ಭಾಗವಹಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶಾಂಘೈ ಸಹಕಾರ ಸಂಘಟನೆಯ ವಾರ್ಷಿಕ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪ್ರಭಾವಿ ಗುಂಪಿನ ಇತರ ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ಭಾಗವಹಿಸಿದ್ದರು.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೋದಿಯನ್ನು ಭೇಟಿಯಾದರೂ ಕೂಡ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಲಿಲ್ಲ. ಆದರೆ ಉಭಯ ನಾಯಕರು ಸಭೆಯಲ್ಲಿ ಪ್ರಧಾನಿ ಮೋದಿಗೆ ಶುಭಾಶಯ ಕೋರಿದ್ದಾರೆ.
ಐತಿಹಾಸಿಕ ಉಜ್ಬೇಕಿಸ್ತಾನದ ಸಮರ್‌ಕಂಡ್‌ನಲ್ಲಿ ಎರಡು ವರ್ಷಗಳಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಮೊದಲ ವೈಯಕ್ತಿಕ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ಮೋದಿ ಶನಿವಾರ 72 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.
ನಾನು ಭಾರತಕ್ಕೆ ಶುಭ ಹಾರೈಸುತ್ತೇನೆ. ನಾಳೆ ನನ್ನ ಆತ್ಮೀಯ ಸ್ನೇಹಿತನೇ, ನೀನು ನಿನ್ನ ಜನ್ಮದಿನವನ್ನು ಆಚರಿಸಲಿರುವೆ ಎಂದು ನನಗೂ ತಿಳಿದಿದೆ. ರಷ್ಯಾದ ಸಂಪ್ರದಾಯದ ಪ್ರಕಾರ, ನಾವು ಎಂದಿಗೂ ಮುಂಚಿತವಾಗಿ ಅಭಿನಂದನೆಗಳನ್ನು ಸಲ್ಲಿಸುವುದಿಲ್ಲ. ಹಾಗಾಗಿ, ಇದೀಗ ನಾನು ಅದನ್ನು ಮಾಡಲು ಸಾಧ್ಯವಿಲ್ಲ ಎಂದು ಪುಟಿನ್ ಶುಕ್ರವಾರ ಹೇಳಿದ್ದಾರೆ.
ಸೌಹಾರ್ದಯುತ ಭಾರತೀಯ ರಾಷ್ಟ್ರಕ್ಕೆ ನಾವು ಶುಭ ಹಾರೈಸುತ್ತೇವೆ ಮತ್ತು ನಿಮ್ಮ ನಾಯಕತ್ವದಲ್ಲಿ ಭಾರತಕ್ಕೆ ಸಮೃದ್ಧಿಯನ್ನು ಬಯಸುತ್ತೇವೆ ಎಂದು ಪುಟಿನ್ ಹೇಳಿದ್ದಾರೆ.
ರಷ್ಯಾ ಮತ್ತು ಭಾರತದ ನಡುವಿನ ಸಂಬಂಧಗಳು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿವೆ ಮತ್ತು ಕಾರ್ಯತಂತ್ರದ ವಿಶೇಷ ಪಾಲುದಾರಿಕೆಯ ಸ್ವರೂಪವನ್ನು ಹೊಂದಿವೆ ಎಂದು ಪುಟಿನ್ ಹೇಳಿದರು, ಉಭಯ ದೇಶಗಳು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ ಎಂದು ಪ್ರತಿಪಾದಿಸಿದರು.
“ಅಧ್ಯಕ್ಷ ಪುಟಿನ್ ಅವರೊಂದಿಗೆ ಅದ್ಭುತವಾದ ಸಭೆಯನ್ನು ನಡೆಸಿದ್ದೇವೆ. ವ್ಯಾಪಾರ, ಇಂಧನ, ರಕ್ಷಣೆ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿ ಭಾರತ-ರಷ್ಯಾ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಚರ್ಚಿಸಲು ನಮಗೆ ಅವಕಾಶ ಸಿಕ್ಕಿತು. ನಾವು ಇತರ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಚರ್ಚಿಸಿದ್ದೇವೆ” ಎಂದು ಪುಟಿನ್ ಅವರೊಂದಿಗಿನ ಭೇಟಿಯ ಬಗ್ಗೆ ಮೋದಿ ಟ್ವೀಟ್ ಮಾಡಿದ್ದಾರೆ. .
ಸುಮಾರು 24 ಗಂಟೆಗಳ ಭೇಟಿಗಾಗಿ ಪ್ರಧಾನಿ ಮೋದಿ ಗುರುವಾರ ರಾತ್ರಿ ಅಲ್ಲಿಗೆ ತೆರಳಿದ್ದರು. ಎಂಟು ರಾಷ್ಟ್ರಗಳ ಪ್ರಭಾವಿ ಗುಂಪಿನ ಶೃಂಗಸಭೆಯು ಉಕ್ರೇನ್‌ನ ರಷ್ಯಾದ ಆಕ್ರಮಣ ಮತ್ತು ತೈವಾನ್ ಜಲಸಂಧಿಯಲ್ಲಿ ಚೀನಾದ ಆಕ್ರಮಣಕಾರಿ ಮಿಲಿಟರಿ ಪಡೆಯಿಂದ ಹೆಚ್ಚುತ್ತಿರುವ ಭೌಗೋಳಿಕ-ರಾಜಕೀಯ ಪ್ರಕ್ಷುಬ್ಧತೆಯ ನಡುವೆ ನಡೆಯುತ್ತಿದೆ.
ಜೂನ್ 2001 ರಲ್ಲಿ ಶಾಂಘೈನಲ್ಲಿ ಪ್ರಾರಂಭವಾದ SCO ತನ್ನ ಆರು ಸ್ಥಾಪಕ ಸದಸ್ಯರಾದ ಚೀನಾ, ಕಝಾಕಿಸ್ತಾನ್, ಕಿರ್ಗಿಸ್ತಾನ್, ರಷ್ಯಾ, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಸೇರಿದಂತೆ ಎಂಟು ಪೂರ್ಣ ಸದಸ್ಯರನ್ನು ಹೊಂದಿದೆ. ಭಾರತ ಮತ್ತು ಪಾಕಿಸ್ತಾನವು 2017 ರಲ್ಲಿ ಪೂರ್ಣ ಸದಸ್ಯರಾಗಿ ಸೇರಿಕೊಂಡವು.
ಇತರೆ ದೇಶಗಳ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:43 am, Sat, 17 September 22