AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಜನಿಸಿದ ಮಗುವಿಗೆ ತಾಯಿ ಇಟ್ಟ ಹೆಸರೇನು ಗೊತ್ತಾ?

ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ವಿಮಾನದ ಮುಖಾಂತರ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿಯೇ ಹೆರಿಗೆಯಾಗಿದೆ. ಹೀಗಾಗಿ ಆ ತಾಯಿ ತನ್ನ ಮಗುವಿಗೆ ಈಗ ಸ್ಕೈ ಎಂದು ಹೆಸರಿಟ್ಟಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಮೆರಿಕಾದ ಅಲಾಸ್ಕಾದ ಗ್ಲೆನೆಲ್ಲನ್‌ನ ಸಣ್ಣ ಸಮುದಾಯದಲ್ಲಿ ಜೀವನ ನಡೆಸುತ್ತಿರುವ ಕ್ರಿಸ್ಟಲ್ ಹಿಕ್ಸ್ ಎಂಬ ಮಹಿಳೆಗೆ ಆಗಸ್ಟ್ 5ರಂದು ಹೆರಿಗೆ ನೋವು ಶುರುವಾಗಿದೆ. ಆಗ ಗರ್ಭಿಣಿಯನ್ನು ವಿಮಾನದಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಹಿಳೆಗೆ ದಾರಿ ಮಧ್ಯದಲ್ಲಿಯೇ ಹೆರಿಗೆಯಾಗಿದೆ. ಹೀಗಾಗಿ ಮಹಿಳೆ ಆ ಮಗುವಿಗೆ ಸ್ಕೈ ಐರಾನ್ […]

ವಿಮಾನದಲ್ಲಿ ಜನಿಸಿದ ಮಗುವಿಗೆ ತಾಯಿ ಇಟ್ಟ ಹೆಸರೇನು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: Guru|

Updated on: Aug 14, 2020 | 6:47 PM

Share

ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ವಿಮಾನದ ಮುಖಾಂತರ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿಯೇ ಹೆರಿಗೆಯಾಗಿದೆ. ಹೀಗಾಗಿ ಆ ತಾಯಿ ತನ್ನ ಮಗುವಿಗೆ ಈಗ ಸ್ಕೈ ಎಂದು ಹೆಸರಿಟ್ಟಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ.

ಅಮೆರಿಕಾದ ಅಲಾಸ್ಕಾದ ಗ್ಲೆನೆಲ್ಲನ್‌ನ ಸಣ್ಣ ಸಮುದಾಯದಲ್ಲಿ ಜೀವನ ನಡೆಸುತ್ತಿರುವ ಕ್ರಿಸ್ಟಲ್ ಹಿಕ್ಸ್ ಎಂಬ ಮಹಿಳೆಗೆ ಆಗಸ್ಟ್ 5ರಂದು ಹೆರಿಗೆ ನೋವು ಶುರುವಾಗಿದೆ. ಆಗ ಗರ್ಭಿಣಿಯನ್ನು ವಿಮಾನದಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಹಿಳೆಗೆ ದಾರಿ ಮಧ್ಯದಲ್ಲಿಯೇ ಹೆರಿಗೆಯಾಗಿದೆ. ಹೀಗಾಗಿ ಮಹಿಳೆ ಆ ಮಗುವಿಗೆ ಸ್ಕೈ ಐರಾನ್ ಹಿಕ್ಸ್‌ ಎಂದು ಹೆಸರಿಟ್ಟಿದ್ದಾಳೆ.

ನಿಗದಿತ ಅವಧಿಗೂ ಮುನ್ನವೇ ಮಗು ಜನಿಸಿದ್ದರಿಂದ ಮಗುವನ್ನು ಉಸಿರಾಟದ ಯಂತ್ರದಲ್ಲಿ ಇರಿಸಿ, ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಮುಂದಿನ ವಾರ ತಾಯಿ ಮತ್ತು ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ನಿರೀಕ್ಷೆ ಇದೆ ಎನ್ನಲಾಗಿದೆ.

ಜೊತೆಗೆ ಮಗು ಸುಮಾರು 18,000 ಅಡಿ ಅಂದರೆ 5,500 ಮೀಟರ್ ಎತ್ತರದಲ್ಲಿ ಜನಿಸಿದೆ. ಹೀಗಾಗಿ ಮಗುವಿನ ಜನನ ಪ್ರಮಾಣ ಪತ್ರದಲ್ಲಿ, ಜನನ ಸ್ಥಳದ ಮಾಹಿತಿಯಲ್ಲಿ ಯಾವ ಸ್ಥಳವನ್ನು ಉಲ್ಲೇಖಿಸಬೇಕು ಎನ್ನುವ ಗೊಂದಲದಲ್ಲಿ ಈಗ ವೈದ್ಯರು ಸಿಲುಕಿದ್ದಾರೆ ಎನ್ನಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ