ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆ ಆರಂಭ; ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಭಾಗಿ

ಜನವರಿ 24ರಿಂದ 29ರ ವರೆಗೆ ನಡೆಯಲಿರುವ ಶೃಂಗಸಭೆಯಲ್ಲಿ, G20 ಮುಖ್ಯಸ್ಥರ 15 ವಿಶೇಷ ಭಾಷಣಗಳು ಇರಲಿವೆ. ಪ್ರಧಾನಿ ನರೇಂದ್ರ ಮೋದಿ, ಗುರುವಾರ ತಮ್ಮ ಭಾಷಣ ಮಾಡಲಿರುವ ಬಗ್ಗೆ WEFನಿಂದ ಮಾಹಿತಿ ಲಭ್ಯವಾಗಿದೆ.

ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆ ಆರಂಭ; ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಭಾಗಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Follow us
TV9 Web
| Updated By: ganapathi bhat

Updated on:Apr 06, 2022 | 8:44 PM

ದೆಹಲಿ: ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯು (World Economic Forum Summit-WEF) ಇಂದು (ಭಾನುವಾರ) ಆರಂಭಗೊಂಡಿದೆ. ಆರು ದಿನಗಳ ಕಾಲ ನಡೆಯಲಿರುವ ಈ ಆನ್​ಲೈನ್ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಭಾಗವಹಿಸಲಿದ್ದಾರೆ.

ಇದು ಜಾಗತಿಕ ಮಟ್ಟದಲ್ಲಿ ನಡೆಯಲಿರುವ ಪ್ರಸ್ತುತ ವರ್ಷದ ಮೊದಲ ಪ್ರಮುಖ ಶೃಂಗಸಭೆಯಾಗಿರಲಿದೆ. ವಿವಿಧ ಸರ್ಕಾರ, ರಾಜ್ಯಗಳ ನಾಯಕರು, ವಿಶ್ವದ ದೊಡ್ಡ ಸಂಸ್ಥೆಗಳ CEOಗಳು, ವಿವಿಧ ಸಂಸ್ಥೆಯ ಮುಖ್ಯಸ್ಥರ ಸಹಿತ ಒಂದು ಸಾವಿರಕ್ಕೂ ಅಧಿಕ ಜಾಗತಿಕ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು, ನಾಗರಿಕ ಸಮಾಜದ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಕೊವಿಡ್-19ರ ಬಳಿಕ ಜಾಗತಿಕ ವಲಯದ, ಆರ್ಥಿಕತೆ, ಪರಿಸರ, ಸಮಾಜ ಹಾಗೂ ತಂತ್ರಜ್ಞಾನದ ಸವಾಲುಗಳನ್ನು ಚರ್ಚಿಸಲಿದ್ದಾರೆ.

ಜನವರಿ 24ರಿಂದ 29ರ ವರೆಗೆ ನಡೆಯಲಿರುವ ಶೃಂಗಸಭೆಯಲ್ಲಿ, G20 ಮುಖ್ಯಸ್ಥರ 15 ವಿಶೇಷ ಭಾಷಣಗಳು ಇರಲಿವೆ. ಪ್ರಧಾನಿ ನರೇಂದ್ರ ಮೋದಿ, ಗುರುವಾರ ತಮ್ಮ ಭಾಷಣ ಮಾಡಲಿರುವ ಬಗ್ಗೆ WEFನಿಂದ ಮಾಹಿತಿ ಲಭ್ಯವಾಗಿದೆ. ಚೀನಾ ಪ್ರಧಾನಿ ಷಿ ಜಿನ್​ಪಿಂಗ್, ಸೋಮವಾರ ತಮ್ಮ ಭಾಷಣ ಮಾಡಲಿದ್ದಾರೆ. ವಿಶ್ವಸಂಸ್ಥೆಯ ಕಾರ್ಯದರ್ಶಿ ಅಂಟೋನಿಯೋ ಗುಟರೆಸ್ ಕೂಡ ಸಭೆಯಲ್ಲಿ ಮಾತನಾಡಲಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಆರೋಗ್ಯ ಸಚಿವ ಹರ್ಷ ವರ್ಧನ್ ಹಾಗೂ ಪೆಟ್ರೋಲಿಯಂ ಮತ್ತು ಸ್ಟೀಲ್ ಸಚಿವ ಧರ್ಮೇಂದ್ರ ಪ್ರಧಾನ್ ಸಹಿತ ವಾಣಿಜ್ಯ ಕ್ಷೇತ್ರದ ಆನಂದ್ ಮಹೀಂದ್ರಾ, ಸಲೀಲ್ ಪರೇಖ್ ಹಾಗೂ ಶೋಭನಾ ಕಮಿನೇನಿ ಭಾರತದಿಂದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಇತರರಾಗಿದ್ದಾರೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ; ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರಿಂದ ಶುಭಾಶಯ

Published On - 9:18 pm, Sun, 24 January 21

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?