Indian Cough Syrup: ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು

ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು ಮಾಡಿದೆ. ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮಿನ ಸಿರಪ್‌ಗಳನ್ನು ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ.

Indian Cough Syrup: ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು
ಕೆಮ್ಮಿನ ಸಿರಪ್
Follow us
TV9 Web
| Updated By: ನಯನಾ ರಾಜೀವ್

Updated on:Jan 12, 2023 | 7:21 AM

ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು ಮಾಡಿದೆ. ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮಿನ ಸಿರಪ್‌ಗಳನ್ನು ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ. ವೈದ್ಯಕೀಯ ಉತ್ಪನ್ನದ ಕುರಿತು ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ ಮೆರಿಯನ್ ಬಯೋಟೆಕ್‌ನಿಂದ ತಯಾರಿಸಲ್ಪಟ್ಟ ಗುಣಮಟ್ಟದ ವೈದ್ಯಕೀಯ ಉತ್ಪನ್ನಗಳು ಗುಣಮಟ್ಟದ ಮಾನದಂಡಗಳು ಅಥವಾ ವಿಶೇಷಣಗಳನ್ನು ಪೂರೈಸಲು ವಿಫಲವಾದ ಉತ್ಪನ್ನಗಳಾಗಿವೆ ಮತ್ತು ಹಾಗಾಗಿ ನಿರ್ದಿಷ್ಟತೆಯಿಂದ ಹೊರಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Cough Syrup: ಭಾರತದಲ್ಲಿ ತಯಾರಾದ ಶೀತ-ಕೆಮ್ಮಿನ ಔಷಧಿ ಸೇವಿಸಿ ಆಫ್ರಿಕಾದಲ್ಲಿ 66 ಮಕ್ಕಳ ಸಾವು

ಗ್ಯಾಂಬಿಯಾದಲ್ಲಿ ಭಾರತ ಮೂಲದ ಔಷಧಿ ಕಂಪನಿ ತಯಾರಿಸಿದ ಕೆಮ್ಮಿನ ಔಷಧಿ ಕುಡಿದು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ, ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಭಾರತೀಯ ಔಷಧೀಯ ಕಂಪನಿಯೊಂದು ತಯಾರಿಸಿದ ಔಷಧಿಗಳನ್ನು ಸೇವಿಸಿ ದೇಶದಲ್ಲಿ 18 ಮಕ್ಕಳು ಸಾವನ್ನಪ್ಪಿರುವುದಾಗಿ ಹೇಳಿಕೊಂಡಿದೆ. ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಕುಡಿದು ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ್ ಆರೋಗ್ಯ ಸಚಿವಾಲಯ ಹೇಳಿತ್ತು.

ಡಾಕ್-1 ಮ್ಯಾಕ್ಸ್ ಔಷಧ ಉಸಿರಾಟದ ತೊಂದರೆ ಇರುವ ಮಕ್ಕಳಿಗೆ ಡಾಕ್-1 ಮ್ಯಾಕ್ಸ್ ಔಷಧವನ್ನು ನೀಡಲಾಗಿದೆ. ಈ ಔಷಧಿಯನ್ನು ಭಾರತದಲ್ಲಿ ತಯಾರಿಸಲಾಗುತ್ತದೆ. ಔಷಧಿ ನೀಡಿದ ಬಳಿಕ 21 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ 18 ಮಕ್ಕಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುವ ಮೊದಲು ಸತ್ತ ಮಕ್ಕಳು ಮನೆಯಲ್ಲಿ ಈ ಔಷಧಿಯನ್ನು 2 ರಿಂದ 7 ದಿನಗಳವರೆಗೆ ದಿನಕ್ಕೆ 3-4 ಬಾರಿ ತೆಗೆದುಕೊಂಡಿದ್ದಾರೆ.

ಮರಿಯನ್ ವೆಬ್​ಸೈಟ್​ ಕೆಮ್ಮು, ಕಟ್ಟಿದ ಮೂಗು, ಗಂಟಲು ನೋವು, ಸೈನಟಿಸ್, ತಲೆನೋವು, ದೇಹ-ನೋವು ಮತ್ತು ಜ್ವರಕ್ಕೆ ಡಾಕ್-1 ಮ್ಯಾಕ್ಸ್ ಮಾತ್ರೆಗಳನ್ನು ಸೂಚಿಸಲಾಗುತ್ತದೆ ಎಂದು ಮರಿಯನ್ ಬಯೋಟೆಕ್‌ನ ವೆಬ್‌ಸೈಟ್ ಹೇಳುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:20 am, Thu, 12 January 23

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ