ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್‌ಗಳನ್ನು ಬಳಸದಂತೆ WHO ಶಿಫಾರಸು ಮಾಡಿದೆ. ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮಿನ ಸಿರಪ್‌ಗಳನ್ನು ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ. ವೈದ್ಯಕೀಯ ಉತ್ಪನ್ನದ ಕುರಿತು ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ ಮೆರಿಯನ್ ಬಯೋಟೆಕ್‌ನಿಂದ ತಯಾರಿಸಲ್ಪಟ್ಟ ಗುಣಮಟ್ಟದ ವೈದ್ಯಕೀಯ ಉತ್ಪನ್ನಗಳು ಗುಣಮಟ್ಟದ ಮಾನದಂಡಗಳು ಅಥವಾ ವಿಶೇಷಣಗಳನ್ನು ಪೂರೈಸಲು ವಿಫಲವಾದ ಉತ್ಪನ್ನಗಳಾಗಿವೆ ಮತ್ತು ಹಾಗಾಗಿ ನಿರ್ದಿಷ್ಟತೆಯಿಂದ ಹೊರಗಿದೆ ಎಂದು ಹೇಳಲಾಗಿದೆ.
ಮತ್ತಷ್ಟು ಓದಿ: Cough Syrup: ಭಾರತದಲ್ಲಿ ತಯಾರಾದ ಶೀತ-ಕೆಮ್ಮಿನ ಔಷಧಿ ಸೇವಿಸಿ ಆಫ್ರಿಕಾದಲ್ಲಿ 66 ಮಕ್ಕಳ ಸಾವು
ಗ್ಯಾಂಬಿಯಾದಲ್ಲಿ ಭಾರತ ಮೂಲದ ಔಷಧಿ ಕಂಪನಿ ತಯಾರಿಸಿದ ಕೆಮ್ಮಿನ ಔಷಧಿ ಕುಡಿದು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ, ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಭಾರತೀಯ ಔಷಧೀಯ ಕಂಪನಿಯೊಂದು ತಯಾರಿಸಿದ ಔಷಧಿಗಳನ್ನು ಸೇವಿಸಿ ದೇಶದಲ್ಲಿ 18 ಮಕ್ಕಳು ಸಾವನ್ನಪ್ಪಿರುವುದಾಗಿ ಹೇಳಿಕೊಂಡಿದೆ. ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಕುಡಿದು ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ್ ಆರೋಗ್ಯ ಸಚಿವಾಲಯ ಹೇಳಿತ್ತು.
ಡಾಕ್-1 ಮ್ಯಾಕ್ಸ್ ಔಷಧ
ಉಸಿರಾಟದ ತೊಂದರೆ ಇರುವ ಮಕ್ಕಳಿಗೆ ಡಾಕ್-1 ಮ್ಯಾಕ್ಸ್ ಔಷಧವನ್ನು ನೀಡಲಾಗಿದೆ. ಈ ಔಷಧಿಯನ್ನು ಭಾರತದಲ್ಲಿ ತಯಾರಿಸಲಾಗುತ್ತದೆ. ಔಷಧಿ ನೀಡಿದ ಬಳಿಕ 21 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ 18 ಮಕ್ಕಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುವ ಮೊದಲು ಸತ್ತ ಮಕ್ಕಳು ಮನೆಯಲ್ಲಿ ಈ ಔಷಧಿಯನ್ನು 2 ರಿಂದ 7 ದಿನಗಳವರೆಗೆ ದಿನಕ್ಕೆ 3-4 ಬಾರಿ ತೆಗೆದುಕೊಂಡಿದ್ದಾರೆ.
ಮರಿಯನ್ ವೆಬ್‌ಸೈಟ್
ಕೆಮ್ಮು, ಕಟ್ಟಿದ ಮೂಗು, ಗಂಟಲು ನೋವು, ಸೈನಟಿಸ್, ತಲೆನೋವು, ದೇಹ-ನೋವು ಮತ್ತು ಜ್ವರಕ್ಕೆ ಡಾಕ್-1 ಮ್ಯಾಕ್ಸ್ ಮಾತ್ರೆಗಳನ್ನು ಸೂಚಿಸಲಾಗುತ್ತದೆ ಎಂದು ಮರಿಯನ್ ಬಯೋಟೆಕ್‌ನ ವೆಬ್‌ಸೈಟ್ ಹೇಳುತ್ತದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:20 am, Thu, 12 January 23