AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ನರ್ಸ್​ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ಮುಂದೂಡಿದ ಯೆಮೆನ್

ಮಹತ್ವದ ಬೆಳವಣಿಗೆಯೊಂದರಲ್ಲಿ, ಯೆಮೆನ್‌ನ ಸ್ಥಳೀಯ ಅಧಿಕಾರಿಗಳು ಜುಲೈ 16 ರಂದು ನಿಗದಿಯಾಗಿದ್ದ ಭಾರತೀಯ ಪ್ರಜೆ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಮುಂದೂಡಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭದಿಂದಲೂ ವಿದೇಶಾಂಗ ಸಚಿವಾಲಯ ಸಹಾಯ ಮಾಡುತ್ತಿದೆ. ಯೆಮೆನ್​​ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ(Nimisha Priya) ಪ್ರಕರಣ ಕುರಿತು ಪ್ರಸಿದ್ಧ ಸೂಫಿ ವಿದ್ವಾಂಸ ಶೇಖ್ ಹಬೀಬ್ ಉಮರ್ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆದಿತ್ತು. ಸಭೆಯಲ್ಲಿ ಯೆಮೆನ್ ಸರ್ಕಾರದ ಪ್ರತಿನಿಧಿಗಳು, ನ್ಯಾಯಮೂರ್ತಿಗಳು ಮತ್ತು ಮೃತ ತಲಾಲ್ ಅವರ ಸಹೋದರ ಭಾಗವಹಿಸಿದ್ದರು. ಕೇರಳದ ಪಾಲಕ್ಕಾಡ್‌ನ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ, ತನ್ನ ಪಾರ್ಟ್​ನರ್​ ಕೊಲೆ ಆರೋಪದ ಮೇಲೆ 2017 ರಿಂದ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ.

ಕೇರಳದ ನರ್ಸ್​ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ಮುಂದೂಡಿದ ಯೆಮೆನ್
ನಿಮಿಷಾ ನರ್ಸ್​
ನಯನಾ ರಾಜೀವ್
|

Updated on:Jul 15, 2025 | 2:32 PM

Share

ಯೆಮೆನ್, ಜುಲೈ 15: ಮಹತ್ವದ ಬೆಳವಣಿಗೆಯೊಂದರಲ್ಲಿ, ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಮುಂದೂಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ವಿಚಾರಣೆ ಆರಂಭದಿಂದಲೂ ವಿದೇಶಾಂಗ ಸಚಿವಾಲಯ ಸಹಾಯ ಮಾಡುತ್ತಿದೆ.

ಯೆಮೆನ್​​ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣ ಕುರಿತು ಪ್ರಸಿದ್ಧ ಸೂಫಿ ವಿದ್ವಾಂಸ ಶೇಖ್ ಹಬೀಬ್ ಉಮರ್ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆದಿತ್ತು. ಸಭೆಯಲ್ಲಿ ಯೆಮೆನ್ ಸರ್ಕಾರದ ಪ್ರತಿನಿಧಿಗಳು, ನ್ಯಾಯಮೂರ್ತಿಗಳು ಮತ್ತು ಮೃತ ತಲಾಲ್ ಅವರ ಸಹೋದರ ಭಾಗವಹಿಸಿದ್ದರು. ಕೇರಳದ ಪಾಲಕ್ಕಾಡ್‌ನ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ, ತನ್ನ ಪಾರ್ಟ್​ನರ್​ ಕೊಲೆ ಆರೋಪದ ಮೇಲೆ 2017 ರಿಂದ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ.

2017ರಲ್ಲಿ ತನ್ನ ಯೆಮೆನ್‌ನ ವ್ಯವಹಾರ ಬ್ಯುಸಿನೆಸ್ ಪಾರ್ಟ್ನರ್​ ಅಬ್ದೋ ಮಹ್ದಿ ಕೊಲೆಗೆ ಗಲ್ಲು ಶಿಕ್ಷೆಗೊಳಗಾದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಮಾತುಕತೆಗಳು ನಡೆಯುತ್ತಿದೆ. ಯೆಮೆನ್‌ನಲ್ಲಿ ಶರಿಯಾ ಕಾನೂನಿನಡಿಯಲ್ಲಿ, ಬ್ಲಡ್ ಮನಿ ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ನೀಡಲಾಗುವ ಕಾನೂನುಬದ್ಧವಾದ ಆರ್ಥಿಕ ಪರಿಹಾರವಾಗಿದೆ.

ಮತ್ತಷ್ಟು ಓದಿ: ನಿಮಿಷಾ ಪ್ರಿಯಾ ಮರಣದಂಡನೆ: ಯೆಮೆನ್​​ನಲ್ಲಿ ಶೇಖ್ ಹಬೀಬ್ ಉಮರ್ ನೇತೃತ್ವದಲ್ಲಿ ನಿರ್ಣಾಯಕ ಸಭೆ

ಏತನ್ಮಧ್ಯೆ, ಮಾತುಕತೆಗಳನ್ನು ಸುಗಮಗೊಳಿಸಲು ಇಲ್ಲಿನ ಮುಸ್ಲಿಯಾರ್ ಅವರ ಪ್ರಧಾನ ಕಚೇರಿಯಲ್ಲಿ, ಪ್ರತ್ಯೇಕ ಕಚೇರಿಯನ್ನು ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಾಲಕ್ಕಾಡ್ ಜಿಲ್ಲೆಯ ನಿಮಿಷಾ ಪ್ರಿಯಾ ಅವರಿಗೆ 2020 ರಲ್ಲಿ ಮರಣದಂಡನೆ ವಿಧಿಸಲಾಯಿತು ಮತ್ತು ಅವರ ಅಂತಿಮ ಮೇಲ್ಮನವಿಯನ್ನು 2023 ರಲ್ಲಿ ತಿರಸ್ಕರಿಸಲಾಯಿತು. ನಿಮಿಷಾ ಕಡೆಯವರು 8.6 ಕೋಟಿ ರೂ. ನೀಡಲು ಸಿದ್ಧರಿದ್ದರು. ಆದರೆ ಮೃತ ವ್ಯಕ್ತಿಯ ಕಡೆಯವರು ಒಪ್ಪಿಕೊಂಡಿರಲಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Tue, 15 July 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು