ಮಕ್ಕಾದಲ್ಲಿ ಯೋಗ ಕಾರ್ಯಕ್ರಮ: ಸೌದಿ ಅರೇಬಿಯಾ ಸರ್ಕಾರದಿಂದ ಮಹತ್ವದ ನಿರ್ಧಾರ

Makkah Second Saudi Open Yoga Championship: ಸೌದಿ ಅರೇಬಿಯಾ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮಕ್ಕಾ ಎರಡನೇ ಸೌದಿ ಮುಕ್ತ ಯೋಗ ಚಾಂಪಿಯನ್‌ಶಿಪ್ ಆಯೋಜಿಸಿತ್ತು. ಜನವರಿ 27ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಲವಾರು ಬಾಲಕಿಯರು ಹಾಗೂ 10ಕ್ಕೂ ಹೆಚ್ಚು ಬಾಲಕರು ಭಾಗವಹಿಸಿದರು.

ಮಕ್ಕಾದಲ್ಲಿ ಯೋಗ ಕಾರ್ಯಕ್ರಮ: ಸೌದಿ ಅರೇಬಿಯಾ ಸರ್ಕಾರದಿಂದ ಮಹತ್ವದ ನಿರ್ಧಾರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 01, 2024 | 11:08 AM

ಯೋಗಕ್ಕೆ ಇಸ್ಲಾಂ ರಾಷ್ಟ್ರಗಳಲ್ಲಿ ಹೆಚ್ಚಿನ ಆದ್ಯತೆ ಇಲ್ಲ, ಇದನ್ನು ಮುಸ್ಲಿಂ ಸಮುದಾಯದಲ್ಲಿ ಪಾಲನೆ ಮಾಡುವುದಿಲ್ಲ ಎಂಬ ವಾದಗಳು ಇದೆ. ಆದರೆ ಇದೀಗ ಸೌದಿ ಅರೇಬಿಯಾ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮಕ್ಕಾ ಎರಡನೇ ಸೌದಿ ಮುಕ್ತ ಯೋಗ ಚಾಂಪಿಯನ್‌ಶಿಪ್ (Makkah Second Saudi Open Yoga Championship) ಆಯೋಜಿಸಿತ್ತು. ಜನವರಿ 27ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಲವಾರು ಬಾಲಕಿಯರು ಹಾಗೂ 10ಕ್ಕೂ ಹೆಚ್ಚು ಬಾಲಕರು ಭಾಗವಹಿಸಿದರು.

ಈ ಯೋಗ ಕಾರ್ಯಕ್ರಮ ಸೌದಿ ಅರೇಬಿಯಾದಲ್ಲಿ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಜೆಡ್ಡಾ, ಮಕ್ಕಾ, ಮದೀನಾ, ತೈಫ್ ಮತ್ತು ಇತರ ನಗರಗಳಿಂದ ಈ ಯೋಗ ಚಾಂಪಿಯನ್‌ಶಿಪ್​​ನಲ್ಲಿ ಭಾಗವಹಿಸುತ್ತಿದ್ದಾರೆ. ಇದು ಪ್ರಾಚೀನ ವೈವಿಧ್ಯಮಯ ವಿಚಾರಗಳಿಗೆ ಸಾಕ್ಷಿಯಾಗುತ್ತಿದೆ. ಈ ಯೋಗ ಚಾಂಪಿಯನ್‌ಶಿಪ್ ಕಾರ್ಯಕ್ರಮ ಸೌದಿ ಅರೇಬಿಯಾ ಒಲಿಂಪಿಕ್ ಸಮಿತಿ ಮತ್ತು ಕ್ರೀಡಾ ಸಚಿವಾಲಯದ ಆಶ್ರಯದಲ್ಲಿ ನಡೆಯಿತು.ಯೋಗವನ್ನು ಕಾನೂನುಬದ್ಧ ಕ್ರೀಡಾ ಚಟುವಟಿಕೆಯಾಗಿ ಅಧಿಕೃತವಾಗಿ ಗುರುತಿಸುವ ಸಂಕೇತವಾಗಿದೆ ಎಂದು ಹೇಳಿದೆ.

ಈ ಕಾರ್ಯಕ್ರಮದಲ್ಲಿ ಸೌದಿ ಯೋಗ ಸಮಿತಿಯ ಅಧ್ಯಕ್ಷರಾದ ನೌಫ್ ಅಲ್-ಮರ್ವಾಯಿ ಅವರು ಉಪಸ್ಥಿತರಿದ್ದರು. ಈ ಯೋಗ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಉತ್ತೇಜಿಸುವಲ್ಲಿ ಮಹತ್ವವನ್ನು ಪಡೆದಿದೆ ಎಂದು ಹೇಳಿದ್ದಾರೆ. ಭಾರತದ ಕಾನ್ಸುಲ್ ಜನರಲ್ ಮೊಹಮ್ಮದ್ ಶಾಹಿದ್ ಆಲಂ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ರೀತಿಯ ಕಾರ್ಯಕ್ರಮಗಳು ಭಾರತ ಮತ್ತು ಸೌದಿ ನಡುವೆ ರಾಜತಾಂತ್ರಿಕ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಸಹಕಾರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವದ ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ, ಭಾರತಕ್ಕೆ ಎಷ್ಟನೇ ಸ್ಥಾನ?

ಯೋಗದಿಂದ ಭಾರತದೊಂದಿಗಿನ ಸಂಬಂಧ ಮಾತ್ರವಲ್ಲ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನ ಕಾಪಾಡುತ್ತದೆ ಎಂದು ಹೇಳಿದ್ದಾರೆ. ಸೌದಿಯನ್ನು ನವೆಂಬರ್ 2017 ರಲ್ಲಿ ಅಧಿಕೃತವಾಗಿ ಯೋಗ ಅನುಮತಿಸಲಾಗಿತ್ತು. ಇದೀಗ ಈ ಯೋಗ ಸೌದಿಯಲ್ಲಿ ಹೆಚ್ಚು ಮಹತ್ವವನ್ನು ಪಡೆದಿದೆ. ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯೋಗವನ್ನು ಪಾಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Thu, 1 February 24

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?