AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಅಸಲಿ ಕಾಶ್ಮೀರಿಗಳಲ್ಲ; ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಗೆ ಪಿಒಕೆಯಲ್ಲಿ ಭಾರಿ ಆಕ್ರೋಶ

ಪಾಕಿಸ್ತಾನದ ರಕ್ಷಣಾ ಸಚಿವರು ಪಾಕ್ ಆಕ್ರಮಿತ ಕಾಶ್ಮೀರದ (PoK) ಜನರ ಗುರುತಿನ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಭಾರೀ ಚರ್ಚೆಗೆ ಒಳಗಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಸ್ಥಳೀಯ ಪ್ರತಿಭಟನಾಕಾರರು ಮತ್ತು ವಿಮರ್ಶಕರ ಕಾಶ್ಮೀರಿ ಗುರುತನ್ನೇ ಪ್ರಶ್ನಿಸಿದ್ದಾರೆ. ರಾವಲಕೋಟ್ ಮತ್ತು ಮಿರ್ಪುರ್ ಭಾಗದ ಜನರು ಸಾಂಪ್ರದಾಯಿಕ ಕಾಶ್ಮೀರಿ ಭಾಷೆಯ ಬದಲಿಗೆ ಪ್ರಮುಖವಾಗಿ 'ಪೊಟೊಹಾರಿ' ಮತ್ತು 'ಪಹಾರಿ' ಉಪಭಾಷೆಗಳನ್ನು ಮಾತನಾಡುವುದರಿಂದ, ಅವರನ್ನು ನಿಜವಾದ ಕಾಶ್ಮೀರಿಗಳು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಆಸಿಫ್ ವಾದಿಸಿದ್ದಾರೆ.

ನೀವು ಅಸಲಿ ಕಾಶ್ಮೀರಿಗಳಲ್ಲ; ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಗೆ ಪಿಒಕೆಯಲ್ಲಿ ಭಾರಿ ಆಕ್ರೋಶ
PokImage Credit source: TV9
ಸುಷ್ಮಾ ಚಕ್ರೆ
|

Updated on: Jun 24, 2026 | 9:28 PM

Share

ಮುಜಾಫರಾಬಾದ್, ಜೂನ್ 24: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ನಾಗರಿಕರ ಗುರುತನ್ನು ಪ್ರಶ್ನಿಸುವ ಮುಖಾಂತರ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ನೀಡಿರುವ ವಿವಾದಾತ್ಮಕ ಹೇಳಿಕೆ ಅಲ್ಲಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ನೀವು ಅಸಲಿ ಕಾಶ್ಮೀರಿಗಳಲ್ಲ” ಎಂದು ಪಾಕಿಸ್ತಾನದ ರಕ್ಷಣಾ ಸಚಿವರು ನೀಡಿರುವ ಹೇಳಿಕೆ ಪಿಒಕೆಯಾದ್ಯಂತ ಸಾರ್ವಜನಿಕ ಪ್ರತಿಭಟನೆಗಳಿಗೆ ನಾಂದಿ ಹಾಡಿದೆ. ಪಾಕಿಸ್ತಾನ ಸರ್ಕಾರವು ಪಿಒಕೆಯ ಜನರನ್ನು ಕೇವಲ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ ಮತ್ತು ಅವರ ಮೂಲ ಅಸ್ತಿತ್ವವನ್ನೇ ನಿರಾಕರಿಸುತ್ತಿದೆ ಎಂದು ಅಲ್ಲಿನ ಸ್ಥಳೀಯ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚೆಗೆ ನಡೆದ ರಾಜಕೀಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್, ಪಿಒಕೆ ಭಾಗದ ನಿವಾಸಿಗಳ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಹಿನ್ನೆಲೆಯನ್ನು ಕೆಣಕುವ ನಿಟ್ಟಿನಲ್ಲಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಪಿಒಕೆ ಜನರನ್ನು ಪಾಕಿಸ್ತಾನದ ಇತರ ಪ್ರಾಂತ್ಯಗಳ ಜನರೊಂದಿಗೆ ಹೋಲಿಸುತ್ತಾ, ಅವರು ಕಣಿವೆ ರಾಜ್ಯದ ಮೂಲ ‘ಅಸಲಿ ಕಾಶ್ಮೀರಿ’ ಅಸ್ತಿತ್ವವನ್ನು ಹೊಂದಿಲ್ಲ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪಿಒಕೆ ನಾಗರಿಕರು ಕೆರಳಿ ಕೆಂಡವಾಗಿದ್ದಾರೆ.

ಇದನ್ನೂ ಓದಿ: ಪಿಒಕೆಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ ಪತನ; ಅಧಿಕಾರಿಗಳು ಸೇರಿದಂತೆ ಎಲ್ಲ ಸೈನಿಕರೂ ಸಜೀವದಹನ

ರಸ್ತೆಗಿಳಿದ ಜನ:

ಮುಜಾಫರಾಬಾದ್, ರಾವಲಕೋಟ್ ಮತ್ತು ಮೀರ್​​ಪುರ ಸೇರಿದಂತೆ ಪಿಒಕೆಯ ಪ್ರಮುಖ ನಗರಗಳಲ್ಲಿ ನೂರಾರು ವಿದ್ಯಾರ್ಥಿಗಳು, ನಾಗರಿಕರು ಮತ್ತು ರಾಜಕೀಯ ಕಾರ್ಯಕರ್ತರು ಪಾಕಿಸ್ತಾನ ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಾಕ್ ಧ್ವಜ, ಸಚಿವರ ಪ್ರತಿಕೃತಿ ದಹನ:

ಆಕ್ರೋಶಗೊಂಡ ಪ್ರತಿಭಟನಾಕಾರರು ಪಾಕಿಸ್ತಾನ ರಕ್ಷಣಾ ಸಚಿವರ ಪ್ರತಿಕೃತಿಯನ್ನು ದಹಿಸಿ, ಇಸ್ಲಾಮಾಬಾದ್ ಆಡಳಿತದ ವಿರುದ್ಧ ತೀವ್ರ ಘೋಷಣೆಗಳನ್ನು ಕೂಗಿದ್ದಾರೆ. “ನಮ್ಮ ಪೂರ್ವಜರು ಈ ಭೂಮಿಗಾಗಿ ತ್ಯಾಗ ಮಾಡಿದ್ದಾರೆ. ನಮ್ಮನ್ನು ಎರಡನೇ ದರ್ಜೆಯ ನಾಗರಿಕರಂತೆ ಕಾಣುವ ಪಾಕಿಸ್ತಾನದ ಮಂತ್ರಿಗಳು ನಮ್ಮ ಗುರುತನ್ನು ನಿರ್ಧರಿಸಲು ಯಾರು?” ಎಂದು ಸ್ಥಳೀಯ ಹೋರಾಟಗಾರರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್

ಪಿಒಕೆ ಪ್ರಾದೇಶಿಕ ನಾಯಕರು ಮತ್ತು ಪ್ರತ್ಯೇಕತಾವಾದಿ ಗುಂಪುಗಳು ಕೂಡ ಖವಾಜಾ ಆಸಿಫ್ ಹೇಳಿಕೆಯನ್ನು ಕಟುವಾಗಿ ಖಂಡಿಸಿದ್ದು, ತಕ್ಷಣವೇ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್